ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆ:
ಶಾಲೆಗಳಿಗೆ ರಜೆ ಘೋಷಿಸಿದ ಕಾಸರಗೋಡು ಜಿಲ್ಲಾಧಿಕಾರಿ
ಕಾಸರಗೋಡು: ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯ ಶಾಲೆಗಳಿಗೆ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಜೆ ಘೋಷಿಸಿದ್ದಾರೆ.
ಜಿಲ್ಲೆಯಲ್ಲಿ ಆದಿತ್ಯವಾರ ಮಧ್ಯಾಹ್ನದಿಂದ ಭಾರಿ ಮಳೆ ಸುರಿಯುತ್ತಿದ್ದು, ನ. 15ರಂದು ಕೂಡ ಭಾರೀ ಮಳೆಗೆ ಸಾಧ್ಯತೆ ಇರುವುದರಿಂದ ಆರಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ಕೆಲವು ಪ್ರದೇಶಗಳಲ್ಲಿ ಎರಡು ದಿನಗಳಿಂದ ಮಳೆ ಸುರಿಯುತ್ತಿದ್ದು, ಹಲವೆಡೆ ಭೂಕುಸಿತದ ಭೀತಿ ತಲೆದೋರಿದೆ. ಮಳೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಎಲ್ಲಾ ತಾಲೂಕುಕೇಂದ್ರಗಳಲ್ಲಿ 24 ಗಂಟೆಯೂ ಕಾರ್ಯಾಚರಿಸುವ ಕಂಟ್ರೋಲ್ ರೂಂ ಗಳನ್ನು ತೆರೆಯಲಾಗಿದೆ ಎಂದು ಹೇಳಿದರು.





