March 20, 2026

ಮಂಗಳೂರು: ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಸೆಲೂನ್ ಮಾಲೀಕ ಮೃತ್ಯು

0
IMG-20221207-WA0023.jpg

ಮಂಗಳೂರು: ಡಿಸೆಂಬರ್ 4 ರಂದು ಮಂಗಳೂರು ನಗರದ ಹೊರ ಭಾಗದ ಅಡ್ಯಾರಿನಲ್ಲಿ ನಡೆದ ಅಪಘಾತದಲ್ಲಿ ತೀವ್ರಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಅಡ್ಯಾರ್ ಬಾಳಿಕೆ ಮನೆ ನಿವಾಸಿ ಕೊರಗಪ್ಪ ಸಾಲ್ಯಾನ್ (65) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ಅಡ್ಯಾರ್ ಸಹ್ಯಾದ್ರಿ ಕಾಲೇಜು ಮುಂಭಾಗ ಡಿ. 4 ರಂದು ಸಂಜೆ ವೇಳೆ ಈ ದುರ್ಘಟನೆ ಸಂಭವಿಸಿತ್ತು.

ಅಡ್ಯಾರ್ ಗಾರ್ಡನ್ ಎದುರುಗಡೆಯ ಸಂತೋಷ್ ಹೇರ್ ಡ್ರೆಸ್ಸಸ್೯ ಎಂಬ ಸೆಲೂನಿನ ಮಾಲಕರಾಗಿದ್ದ ಇವರು ಸೈಕಲ್ ಮೂಲಕ ರಸ್ತೆ ದಾಟುವಾಗ ಬಿ.ಸಿ.ರೋಡ್ ಕಡೆಯಿಂದ ಅಮಿತ ವೇಗದಲ್ಲಿ ಬಂದ ಸ್ವಿಫ್ಟ್ ಕಾರು ಢಿಕ್ಕಿ ಹೊಡೆದಿದೆ.

ಢಿಕ್ಕಿಯ ರಭಸಕ್ಕೆ ದೂರಕ್ಕೆ ಎಸೆಯಲ್ಪಟ್ಟು, ತಲೆಗೆ ಗಂಭೀರ ರೀತಿಯಲ್ಲಿ ಗಾಯಗೊಂಡಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೃತರು ಯುವ ವಯಸ್ಸಿನಲ್ಲಿ ಕಬ್ಬಡ್ಡಿ ಆಟಗಾರರೂ ಹಾಗೂ ತಾಲೀಮಿನಲ್ಲಿ ಸಕ್ರಿಯವಾಗಿ ತನ್ನನ್ನು ತಾನು ತೊಡಗಿಸಿಕೊಂಡಿದ್ದವರು. ಮೃತರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ.

ಮಂಗಳೂರು ದಕ್ಷಿಣ ಸಂಚಾರಿ‌ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕ ಬೆಳ್ತಂಗಡಿಯ ಮಹಮ್ಮದ್ ಆಶೀಕ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!