September 29, 2026

ಮಂಗಳೂರು: ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ: ಮೂವರು ಆರೋಪಿಗಳಿಗೆ ಕಠಿಣ ಶಿಕ್ಷೆ

0
image.jpg

ಮಂಗಳೂರು: ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಮೂವರು ಆರೋಪಿಗಳಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು FTSC-2 (ಪೊಕ್ಸೋ) ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ಉಳ್ಳಾಲ ಕೋಟೆಕಾರಿನ ಡಾರ್ವಿನ್ ಡಿಸೋಜಾ, ಸಂತ್ರಸ್ತೆಯ ತಾಯಿ ಮತ್ತು ಕಲ್ಲಾಪುವಿನ ಮೆಲ್ವಿನ್ ಡಿಸೋಜಾ ಶಿಕ್ಷೆಗೊಳಗಾದ ಆರೋಪಿಗಳಾಗಿದ್ದಾರೆ.

 

ಪೈಂಟರ್ ಆಗಿದ್ದ ಡಾರ್ವಿನ್ ಡಿಸೋಜ ಮಹಿಳೆಯೊಬ್ಬರ ಸ್ನೇಹ ಬೆಳೆಸಿಕೊಂಡಿದ್ದ ಮತ್ತು ಆಕೆಯ ಮನೆಗೆ ಆಗಾಗ ಹೋಗುತ್ತಿದ್ದ ಅಲ್ಲದೆ ಆಕೆಗೆ ಆರ್ಥಿಕ ಸಹಾಯವನ್ನೂ ಮಾಡುತ್ತಿದ್ದ. ಬಳಿಕ ಆಕೆಯ ಅಪ್ರಾಪ್ತ ವಯಸ್ಸಿನ ಪುತ್ರಿಯನ್ನು ಪುಸಲಾಯಿಸಿ ಆಕೆಯ ಮೇಲೆ ಅನೇಕ ಬಾರಿ ಲೈಂಗಿಕ ದೌರ್ಜನ್ಯವೆಸಗಿದ್ದ.

ಇದನ್ನು ಗಮನಿಸದ್ದ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಕ ಆರೋಪಿ ಡೆರ್ವಿನ್ ಡಿಸೋಜ ಬಾಲಕಿಯನ್ನು ತನ್ನ ಸ್ನೇಹಿತ ಮೆಲ್ವಿನ್‌ನ ಮನೆಗೆ ಕರೆದೊಯ್ದು ಅಲ್ಲಿ ಅಕ್ರಮವಾಗಿ ಕೂಡಿ ಹಾಕಿದ್ದ. ಬಾಲಕಿ ಮನೆಯಿಂದ ಹೊರಗೆ ಹೋಗದಂತೆ ನೋಡಿಕೊಂಡಿದ್ದನಲ್ಲದೆ ಅಲ್ಲಿಯೂ ಲೈಂಗಿಕ ದೌರ್ಜನ್ಯವೆಸಗಿದ್ದ.

ಈ ಬಗ್ಗೆ 2016ರ ಡಿಸೆಂಬರ್‌ನಲ್ಲಿ ಮಕ್ಕಳ ರಕ್ಷಣಾ ಘಟಕಕ್ಕೆ ಸಾರ್ವಜನಿಕರು ಮಾಹಿತಿ ನೀಡಿದ್ದರು. ಅದರಂತೆ ರಕ್ಷಣಾ ಘಟಕದವರು ಬಾಲಕಿಯನ್ನು ರಕ್ಷಿಸಿ ಉಳ್ಳಾಲ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು.

ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು FTSC-2 (ಪೊಕ್ಸೋ) ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ.ರಾಧಾಕೃಷ್ಣ ಅವರು ಆರೋಪಿಗಳನ್ನು ತಪ್ಪಿತಸ್ಥರೆಂದು ತೀರ್ಮಾನಿಸಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಆರೋಪಿ ಡೆರ್ವಿನ್ ಡಿಸೋಜಗೆ ಪೋಕ್ಸೋ ಕಲಂ 6ರಡಿ 15 ವರ್ಷ ಕಠಿಣ ಸಜೆ, 50,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 1 ವರ್ಷ ಹೆಚ್ಚುವರಿ ಸಜೆ, ಐಪಿಸಿ ಕಲಂ 366ರಂತೆ 7 ವರ್ಷ ಕಠಿಣ ಸಜೆ, 25,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 6 ತಿಂಗಳ ಸಜೆ, ಐಪಿಸಿ ಕಲಂ 343ರಂತೆ 2 ವರ್ಷ ಕಠಿಣ ಸಜೆ ವಿಧಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!