March 20, 2026

ಉಳ್ಳಾಲ | ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ, ಆರೋಪಿಯ ಬಂಧನ

0
image_editor_output_image1900091171-1670482128287.jpg

ಉಳ್ಳಾಲ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಒಂಬತ್ತು ಕೆರೆ ಬಳಿ ಬುಧವಾರ ರಾತ್ರಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಅಡ್ಯಾರ್ ಪದವು ನಿವಾಸಿ ಮುನೀರ್ ಎಂದು ಗುರುತಿಸಲಾಗಿದೆ.

ಅಡ್ಯಾರ್ ಪದವು ನಿವಾಸಿ ಮುನೀರ್ ತೊಕ್ಕೋಟ್ಟುವಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ. ಅದೇ ಸಂಸ್ಥೆಯಲ್ಲಿ ಉಳ್ಳಾಲ ಬೈಲ್ ನಿವಾಸಿ ಮಹಿಳೆ ಕೆಲಸ ಮಾಡುತ್ತಿದ್ದಳು ಎನ್ನಲಾಗಿದೆ. ಬುಧವಾರ ರಾತ್ರಿ ಮುನೀರ್ ಮಹಿಳೆಯನ್ನು ಭೇಟಿ ಯಾಗಿದ್ದ. ಈ ವೇಳೆ ಮಾಹಿತಿ ಮೇರೆಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ದಾಳಿ ನಡೆಸಿ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಯುವಕನನ್ನು ವಿಚಾರಿಸಿದಾಗ ಹಣ ನೀಡಲು ಬಂದಿರುವುದಾಗಿ ತಿಳಿಸಿದ್ದ .ಈ ಮಹಿಳೆಗೆ ವಿವಾಹ ಆಗಿದ್ದು, ಒಂದು ಮಗು ಕೂಡಾ ಇದೆ. ಎಂದು ಪೊಲೀಸರು ನಡೆಸಿದ ವಿಚಾರಣೆ ವೇಳೆ ತಿಳಿದು ಬಂದಿದೆ. ಈ ಬಗ್ಗೆ ಮಹಿಳೆ ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!