March 20, 2026

ಅಡ್ಯನಡ್ಕ: ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆ

0
IMG-20221208-WA0022.jpg

ಅಡ್ಯನಡ್ಕ: ಪದವಿಪೂರ್ವ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಆಳ್ವಾಸ್ ಪದವಿಪೂರ್ವ ಕಾಲೇಜು ಮೂಡಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟ 2022-23 ಇದರಲ್ಲಿ ನಮ್ಮ ಜನತಾ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರಾದ ನಮಿತಾ ಪ್ರಥಮ ವಿಜ್ಞಾನ ವಿಭಾಗ, ಕೋಲು ಜಿಗಿತದಲ್ಲಿ ಪ್ರಥಮ ಹಾಗೂ ಕಾವ್ಯ ಎಸ್ ದ್ವಿತೀಯ ವಾಣಿಜ್ಯ ವಿಭಾಗ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಈ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ಸಂಸ್ಥೆಯ ದೈಹಿಕ ಶಿಕ್ಷಣ ಉಪನ್ಯಾಸಕರಾದ
ಶ್ರೀ ವಸಂತಗೌಡ ಹಾಗೂ ತಂಡದ ಮೇಲ್ವಿಚಾರಕಿಯಾಗಿ ಶ್ರೀಮತಿ ಜಯಶ್ರೀ ಕೆ ಆರ್ ಸಹಕರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!