August 13, 2026

ಅನುಮಾನಾಸ್ಪದ ವ್ಯಕ್ತಿಗಳ ಮನೆಗಳ ಮೇಲೆ ಪೊಲೀಸರ ದಾಳಿ: ಮಾರಕಾಸ್ತ್ರಗಳ ಪರಿಶೀಲನೆ

0
image_editor_output_image1340391478-1670563802578.jpg

ಗದಗ: ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟರ ನೇತೃತ್ವದಲ್ಲಿ ಪೊಲೀಸರು ಶುಕ್ರವಾರ(ಡಿ.9) ನಗರದ ವಿವಿಧೆಡೆ ಅನುಮಾನಾಸ್ಪದ ವ್ಯಕ್ತಿಗಳ ಮನೆಗಳ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳ ಪರಿಶೀಲನೆ ನಡೆಸಿದರು.

ಗದಗ-ಬೆಟಗೇರಿ ಅವಳಿ ನಗರದ ವಿವಿಧೆಡೆ ಚಾಕು ಇರಿತ ಪ್ರಕರಣ ಸೇರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ನಗರದ ಕಮ್ಮಾರಸಾಲು, ರಂಗನವಾಡ, ತೆಗ್ಗಿನ ಪ್ಲಾಟ್ ಸೇರಿ ಹಲವು ಪ್ರದೇಶಗಳ ಮನೆಗಳ ಮೇಲೆ ಪೊಲೀಸರು ಮಾರಕಾಸ್ತ್ರಗಳನ್ನು ಪರಿಶೀಲಿಸಿದರು.

ನಗರದಲ್ಲಿ ಕಳೆದೊಂದು ವಾರದಲ್ಲಿ ಎರಡು ಪ್ರದೇಶಗಳಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರು ಗಾಯಗೊಂಡಿದ್ದರು. ಐದಕ್ಕೂ ಹೆಚ್ಚು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿತ್ತು.

ಸಿಪಿಐ ಬಿ.ಜಿ. ಸುಬ್ಬಾಪೂರಮಠ ಸೇರಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.

Leave a Reply

Your email address will not be published. Required fields are marked *

You may have missed

error: Content is protected !!