August 13, 2026

ತನ್ನ ಇಬ್ಬರು ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಾಯಿ

0
image_editor_output_image930404500-1670564115669.jpg

ಕೋಲಾರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ.

ಆಂಧ್ರಪ್ರದೇಶ ಮೂಲದ ಜ್ಯೋತಿ ಎಂಬಾಕೆ ತನ್ನಿಬ್ಬರು ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಬಳಿಕ ತಾನೂ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾಳೆ. ಈ ವೇಳೆ ಸ್ಥಳೀಯರು ಆಕೆಯನ್ನು ರಕ್ಷಿಸಿದ್ದಾರೆ. ಬಳಿಕ ಮಕ್ಕಳಿಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

8 ವರ್ಷದ ಅಕ್ಷಯ ಮತ್ತು 6 ವರ್ಷದ ಉದಯ ಶ್ರೀಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಇಬ್ಬರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ತಾಯಿ ಜ್ಯೋತಿಯನ್ನು ಮುಳಬಾಗಿಲು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಜ್ಯೋತಿ ಪತಿ ತಿರುಮಲೇಶ್ನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!