March 20, 2026

ಮದುವೆ ಮನೆಯಲ್ಲಿ ಸಿಲಿಂಡರ್ ಸ್ಫೋಟ: ನಾಲ್ವರು ಅತಿಥಿಗಳು ಸಾವು, 60 ಜನರಿಗೆ ಗಾಯ

0
image_editor_output_image-213776408-1670566333782.jpg

ಜೈಪುರ: ಮದುವೆ ಮನೆಯಲ್ಲಿ ಸಂಭ್ರಮದ ವಾತಾವರಣದಿಂದ ಕೂಡಿರುವಾಗಲೇ ದುರ್ಘಟನೆಯೊಂದು ನಡೆದು, ನಾಲ್ವರು ಅತಿಥಿಗಳು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಜೋಧ್‌ಪುರ ಬಳಿ ಗುರುವಾರ ನಡೆದಿದೆ.

ಜೋಧ್‌ಪುರದಿಂದ 60 ಕಿ.ಮೀ ದೂರದಲ್ಲಿರುವ ಭುಂಗ್ರಾ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ವರನ ಮನೆಯಿಂದ ಮದುವೆ ಮಂಟಪದೆಡೆಗೆ ಮೆರವಣಿಗೆ ಹೊರಡಬೇಕಿದ್ದ ಸ್ವಲ್ಪ ಹೊತ್ತಿಗೂ ಮೊದಲೇ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಅತಿಥಿಗಳು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಸುಮಾರು 60 ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!