March 20, 2026

ಶ್ರದ್ದಾ ವಾಕರ್ ಹತ್ಯೆ ಪ್ರಕರಣ – ಆರೋಪಿ ಅಫ್ತಾಬ್‌ ನ್ಯಾಯಾಂಗ ಬಂಧನ ಅವಧಿ 14 ದಿನ ವಿಸ್ತರಣೆ

0
IMG-20221209-WA0020.jpg

ನವದೆಹಲಿ: ದೆಹಲಿಯ ಶ್ರದ್ದಾ ವಾಕರ್‍ ಕೊಲೆ ಪ್ರಕರಣದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲನ ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳ ಕಾಲ ವಿಸ್ತರಿಸಿ ದೆಹಲಿಯ ಸಾಕೇತ್ ನ್ಯಾಯಾಲಯ ಆದೇಶಿಸಿದೆ.

ಈ ಹಿಂದೆ ಆರೋಪಿಗೆ ವಿಧಿಸಲಾಗಿದ್ದ 13 ದಿನಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಕೊನೆಗೊಳ್ಳಲಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ತನಿಖೆ ಪ್ರಗತಿಯಲ್ಲಿದ್ದು, ಆತನ ನ್ಯಾಯಾಂಗ ಬಂಧನವನ್ನು ವಿಸ್ತರಿಸುವಂತೆ ಪೊಲೀಸರು ಕೋರಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳ ಕಾಲ ವಿಸ್ತರಣೆ ಮಾಡಿತು.

ದೆಹಲಿಯ ಅಪಾರ್ಟ್‌ಮೆಂಟ್‌ನಲ್ಲಿ ತನ್ನ ಲಿವ್ ಇನ್ ಸಂಗಾತಿ ಶ್ರದ್ದಾ ವಾಕರ್‌ನನ್ನು ಹತ್ಯೆಗೈದು ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ದೆಹಲಿಯ ವಿವಿಧ ಸ್ಥಳಗಳಲ್ಲಿ ಎಸೆದಿದ್ದ ಪ್ರಕರಣ ಸಂಬಂಧಿಸಿ ಅಫ್ತಾಬ್‌ನನ್ನು ಬಂಧಿಸಲಾಗಿತ್ತು. ಆತನಿಗೆ ಈಗಾಗಲೇ ಪಾಲಿಗ್ರಾಫ್ ಮತ್ತು ನಾರ್ಕೋ ಪರೀಕ್ಷೆಗಳನ್ನು ನಡೆಸಲಾಗಿದ್ದು, ಎಫ್‌ಎಸ್‌ಎಲ್ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!