August 13, 2026

ಪಡುಬಿದ್ರಿ: ಶಾಲಾ ವಾಹನ ಡಿಕ್ಕಿ: ಪಾದಚಾರಿ ಮಹಿಳೆ ಸ್ಥಳದಲ್ಲೇ ಮೃತ್ಯು

0
IMG-20221209-WA0040.jpg

ಪಡುಬಿದ್ರಿ: ಶಾಲಾ ವಾಹನ ಡಿಕ್ಕಿಯಾಗಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಾಪು ಕೊಪ್ಪಲಂಗಡಿ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ.

ಮೃತರನ್ನು ಕಾಪು ಮಲ್ಲಾರು ನಿವಾಸಿ ರವೀಂದ್ರನಾಥ ಶೆಟ್ಟಿಯವರ ಪತ್ನಿ ಸಪ್ನ(54) ಎಂದು ಗುರುತಿಸಲಾಗಿದೆ.

ಅವರು ಕೊಪ್ಪಲಂಗಡಿಯಲ್ಲಿ ದಿನಸಿ ಅಂಗಡಿಗೆ ಹೋಗಿ ಹಿಂತಿರುಗಿ ಮನೆ ಕಡೆಗೆ ಹೋಗಲು ಕಮ್ಯನಿಟಿ ಹಾಲ್ ಸಮೀಪ ರಸ್ತೆ ದಾಟಲು ನಿಂತಿದ್ದ ವೇಳೆ ಮಂಗಳೂರು ಕಡೆಯಿಂದ ಉಡುಪಿಯತ್ತ ಚಲಿಸುತ್ತಿದ್ದ ಖಾಸಗಿ ವಿದ್ಯಾಸಂಸ್ಥೆಯ ವಾಹನ ಡಿಕ್ಕಿಯಾಗಿದೆ. ಘಟನೆಯಿಂದ ತಲೆಗೆ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!