August 13, 2026

ಬಸವಲಿಂಗ ಸ್ವಾಮೀಜಿ  ಆತ್ಮಹತ್ಯೆ ಪ್ರಕರಣ: ಆರೋಪಿ ನೀಲಾಂಬಿಕೆ ಸಹಿತ ನಾಲ್ವರ ಜಾಮೀನು ಅರ್ಜಿ ವಜಾ

0
image_editor_output_image701515826-1670640191616.jpg

ರಾಮನಗರ: ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನೀಲಾಂಬಿಕೆ ಕಣ್ಣೂರು ಮಠದ ಡಾ. ಮೃತ್ಯುಂಜಯಶ್ರೀ, ವಕೀಲ ಮಹದೇವಯ್ಯ ಹಾಗೂ ಸುರೇಶ್ ಎಂಬುವರ ಜಾಮೀನು ಅರ್ಜಿ ಮತ್ತೊಮ್ಮೆ ವಜಾ ಆಗಿದೆ.

ಆರೋಪಿಗಳು ಕೆಲ ದಿನಗಳ ಹಿಂದೆ ಮಾಗಡಿ ತಾಲೂಕು ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಅಲ್ಲಿ ಅವರ ಅರ್ಜಿ ವಜಾ ಆಗಿದ್ದರಿಂದ ಜಿಲ್ಲಾ ನ್ಯಾಯಾಲಯದ ಮೊರೆ ಹೋಗಿದ್ದರು.

ಇಂದು ನಾಲ್ವರು ಆರೋಪಿಗಳು ಪ್ರತ್ಯೇಕವಾಗಿ ಸಲ್ಲಿಸಿದ್ದ ಜಾಮೀನು ಅರ್ಜಿಗಳ ವಿಚಾರಣೆ ಮಾಡಿದ ರಾಮನಗರ ಜಿಲ್ಲಾ ನ್ಯಾಯಾಲಯದ ನ್ಯಾಯಪೀಠವು ವಾದ-ಪ್ರತಿವಾದಗಳನ್ನು ಆಲಿಸಿತು.

Leave a Reply

Your email address will not be published. Required fields are marked *

You may have missed

error: Content is protected !!