August 13, 2026

ದಕ್ಷಿಣ ಕನ್ನಡ ಜಿಲ್ಲೆಯ ಆರು ಅಂಗಡಿಗಳಿಗೆ ನುಗ್ಗಿದ ಕಳ್ಳರು: ನಗದು, ಬೆಲೆಬಾಳುವ ಸೊತ್ತುಗಳನ್ನು ಕಳವು

0
image_editor_output_image-81352532-1670643057155.jpg

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗವಾದ ತಲಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿಯ ಆರು ಅಂಗಡಿಗಳಿಗೆ ನುಗ್ಗಿದ ಕಳ್ಳರು ಸಾವಿರಾರು ರೂಪಾಯಿ ಬೆಲೆಬಾಳುವ ಸೊತ್ತುಗಳನ್ನು ಕಳವು ಮಾಡಿರುವುದು ಶನಿವಾರ ಬೆಳಿಗ್ಗೆ ಗೊತ್ತಾಗಿದೆ.

ಅಶ್ರಫ್ , ಕುಲದೀಪ್, ಶ್ರೀಧರ್ ಹಾಗೂ ಮಹಮ್ಮದ್ , ಶಂಕರ್ ಎಂಬುವರಿಗೆ ಸೇರಿದ ಅಂಗಡಿಗಳಿಂದ ಸಾವಿರಾರು ರೂಪಾಯಿ ಬೆಲೆಬಾಳುವ ಸಿಗರೇಟ್ ಹಾಗೂ ಡ್ರಾಯರ್ನಲ್ಲಿದ್ದ ನಗದು ಕದ್ದೊಯ್ದಿದ್ದಾರೆ.

ಅಶ್ರಫ್ ಎಂಬವರಿಗೆ ಸೇರಿದ ಝೆರಾಕ್ಸ್ ಅಂಗಡಿಯಿಂದ ನಗದು ಕಳುವಾಗಿದೆ. ರಾತ್ರಿ ವೇಳೆ ಎಲ್ಲಾ ಅಂಗಡಿಗಳ ಬೀಗ ಮುರಿದಿರುವ ಕಳ್ಳರು ಕೈಚಳಕ ತೋರಿಸಿದ್ದಾರೆ. ಕೇರಳದ ಮಂಜೇಶ್ವರ ಹಾಗೂ ಕುಂಜತ್ತೂರು ಭಾಗದಲ್ಲಿಯೂ ಇದೇ ರೀತಿಯ ಕಳವು ಕೃತ್ಯ ನಡೆದಿತ್ತು.

ಇದೀಗ ತಲಪಾಡಿಗೂ ವ್ಯಾಪಿಸಿದೆ. ಗಡಿಭಾಗ ತಲಪಾಡಿ ಗಾಂಜಾ ವ್ಯಸನಿಗಳ ಅಟ್ಟಹಾಸವೂ ಮಿತಿಮೀರಿದ್ದು , ಮದ್ಯವ್ಯಸನಿಗಳೇ ಕಳವು ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆಯಿದೆ.

Leave a Reply

Your email address will not be published. Required fields are marked *

You may have missed

error: Content is protected !!