ಮರಗುತ್ತಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ ಮಾಡಿದ ಅಪರಿಚಿತರು
ಕಲಬುರಗಿ: ತಾಲೂಕಿನ ಮರಗುತ್ತಿ ಗ್ರಾಮಕ್ಕೆ ಹೊಂದಿಕೊಂಡಿರುವ ಎಂ.ಎಂ.ಗಾರ್ಡನ್ ಬಳಿ ಶುಕ್ರವಾರ(ಡಿ.9) ತಡರಾತ್ರಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಕೊಲೆಯಾದವ ಮಾಲಗತ್ತಿ ನಿವಾಸಿ ಸಚಿನ್ ಬಸವರಾಜ್ ಅಂಬಲಗಿ(35) ಎಂದು ಗುರುತಿಸಲಾಗಿದೆ. ಈತ ಮಾಲಗತ್ತಿಯ ಎಂ.ಎಂ.ಗಾರ್ಡನ್ ಬಳಿಯಲ್ಲಿ ದುಷ್ಕರ್ಮಿಗಳ ಮಾರಕಾಸ್ತ್ರಗಳಿಂದ ಹತನಾಗಿದ್ದಾನೆ.
ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಕೊಲೆಗಾರರಿಗಾಗಿ ಹುಡುಕಾಟ ನಡೆದಿದೆ ಎಂದು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯ ಸಿಪಿಐ ಅರುಣ ಮುರಗೊಂಡಿ ತಿಳಿಸಿದ್ದಾರೆ.




