ಗುಜರಾತ್ ವಿಧಾನಸಭೆ 182 ಸದಸ್ಯ ಬಲದಲ್ಲಿ ಏಕೈಕ ಮುಸ್ಲಿಂ ಅಭ್ಯರ್ಥಿ ಇಮ್ರಾನ್ ಖೇಡವಾಲಾ
ಅಹಮದಾಬಾದ್: ಇತ್ತೀಚಿಗೆ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಆಡಳಿರೂಢ ಬಿಜೆಪಿ ಐತಿಹಾಸಿಕ ಗೆಲುವಿನೊಂದಿಗೆ ಸತತ 7ನೇ ಬಾರಿಗೆ ಅಧಿಕಾರಕ್ಕೆ ಏರುತ್ತಿದ್ದು, 182 ಸದಸ್ಯ ಬಲದ ಗುಜರಾತ್ ವಿಧಾನಸಭೆಗೆ ಏಕೈಕ ಮುಸ್ಲಿಂ ಅಭ್ಯರ್ಥಿಯೊಬ್ಬರು ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್‌ನ ಇಮ್ರಾನ್ ಖೇಡವಾಲಾ ಅವರು ಈಗಷ್ಟೇ ಮುಗಿದ ಚುನಾವಣೆಯಲ್ಲಿ ಆಯ್ಕೆಯಾದ ಏಕೈಕ ಮುಸ್ಲಿಂ ಶಾಸಕರಾಗಿದ್ದಾರೆ.
ಕಳೆದ ವಿಧಾನಸಭೆಯಲ್ಲಿ ಮೂವರು ಮುಸ್ಲಿಂ ಶಾಸಕರಿದ್ದರು ಮತ್ತು ಅವರೆಲ್ಲರೂ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದರು.




