March 20, 2026

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ, ಆರೋಪಿ ಹರೀಶ್ ನನ್ನು ಖುಲಾಸೆಗೊಳಿಸಿದ ಕೋರ್ಟ್

0
image_editor_output_image-1080702882-1670732048595.jpg

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

ಆರೋಪಿ ಹರೀಶ ಆಚಾರಿ ಎಂಬಾತ ದೋಷಮುಕ್ತಗೊಂಡವನು. ಕಾಟಿಪಳ್ಳದಲ್ಲಿ ತಾಯಿಯೊಂದಿಗೆ ವಾಸವಿದ್ದ ಯುವತಿಯೊಂದಿಗೆ ನಿಕಟವಾಗಿದ್ದ ಆರೋಪಿ ಬಳಿಕ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೀಗ ಪ್ರಕರಣದ ವಿಚಾರಣೆ ನಡೆಸಿದ ಎಫ್‌ಟಿಎಸ್‌ಸಿ 1ರ ನ್ಯಾಯಾಧೀಶೆ ಮಂಜುಳಾ ಅವರು ಆರೋಪಿಯನ್ನು ದೋಷಮುಕ್ತಗೊಳಿಸಿದರು. ಆರೋಪ ಸಾಬೀತುಪಡಿಸಲು ಪ್ರಾಸಿಕ್ಯೂಶನ್ ವಿಫಲವಾಗಿದೆ ಎಂದು ಆರೋಪಿಯನ್ನು ಅವರು ಖುಲಾಸೆಗೊಳಿಸಿದ್ದಾರೆ.

ನ್ಯಾಯವಾದಿಗಳಾದ ವೇಣುಕುಮಾರ್ ಮತ್ತು ಯುವರಾಜ್ ಕೆ. ಅಮೀನ್ ಆರೋಪಿ ಪರ ವಾದಿಸಿದ್ದರು.

Leave a Reply

Your email address will not be published. Required fields are marked *

error: Content is protected !!