February 3, 2026

ಕೊಲೆ ಪ್ರಕರಣದ ಆರೋಪಿ ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ಆತ್ಮಹತ್ಯೆ

0
image_editor_output_image1488022868-1670745910846.jpg

ಉಡುಪಿ: ಒತ್ತಿನೆಣೆ ಸಮೀಪದ ಹೇನಬೇರು ರಸ್ತೆಯಲ್ಲಿ ಕಾರು ಸಹಿತ ವ್ಯಕ್ತಿಯನ್ನು ಸುಟ್ಟು ಕೊಲೆಗೈದ ಪ್ರಕರಣದ ಪ್ರಮುಖ ಆರೋಪಿ ಆತ್ಮಹತ್ಯೆ ಮಾಡಿದ್ದಾರೆ‌.

ಕಾರ್ಕಳ ತಾಲೂಕಿನ ಮಾಳ ಗ್ರಾಮದ ಪೇರಡ್ಕ ನಿವಾಸಿ ಸದಾನಂದ ಶೇರಿಗಾರ್(52) ಎಂಬಾತ ರವಿವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಹಿರಿಯಡ್ಕ ಅಂಜಾರಿನಲ್ಲಿರುವ ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.

ವಿಚಾರಣಾಧೀನ ಕೈದಿಯಾಗಿರುವ ಈತ, ಜೈಲಿನ 20 ಮಂದಿ ಕೈದಿಗಳಿದ್ದ ಕೊಠಡಿಯಲ್ಲಿಯೇ ಪಂಚೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!