August 12, 2026

ಮೌಂಡಾಸ್ ಚಂಡಮಾರುತ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಹಿನ್ನೆಲೆ ಸೋಮವಾರ ಜಿಲ್ಲೆಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

0
IMG-20221211-WA0047.jpg

ಚಿಕ್ಕಬಳ್ಳಾಪುರ : ಮೌಂಡಾಸ್ ಚಂಡಮಾರುತ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಅದ್ರಲ್ಲೂ ವಿಪರೀತ ಚಳಿಯ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲೆಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

ಮೌಂಡಾಸ್ ಚಂಡಮಾರುತದ ಎಫೆಕ್ಟ್ ರಾಜ್ಯಕ್ಕೆ ತಟ್ಟಿದೆ. ನಾಳೆಯೂ ಮಳೆ ಮುಂದುವರಿಕೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಮಾತ್ರವೇ ರಜೆಯನ್ನು ಘೋಷಣೆ ಮಾಡಲಾಗಿದೆ. ಆದರೆ ಪಿಯುಸಿ, ಪದವಿ, ಸ್ನಾತಕೋತ್ತರ ತರಗತಿಗಳು ಎಂದಿನಂತೆ ನಡೆಯಲಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಅವರು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!