September 29, 2026

ತಹಶೀಲ್ದಾರ್ ಮನೆಯಲ್ಲಿಯೇ ಲಕ್ಷಾಂತರ ರೂ. ಮೌಲ್ಯದ ನಗ, ನಗದು ಕಳವು

0
image_editor_output_image-964647951-1670817856225.jpg

ಬೆಳಗಾವಿ: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬೀಗ ಮುರಿದು, ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಎಗರಿಸಿ ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಗೋಕಾಕ್ ತಹಶೀಲ್ದಾರ್ ಪ್ರಕಾಶ್ ಅವರ ಮನೆಯಲ್ಲಿಯೇ ಲಕ್ಷಾಂತರ ರೂ. ಮೌಲ್ಯದ ಕಳ್ಳತನವಾಗಿದೆ.

 

ಗೋಕಾಕ್ ನಗರದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದ ಬೀಗ ಮುರಿದು ಒಳಗೆ ಹೊಕ್ಕ ಖದೀಮರು ಮನೆಯಲ್ಲಿದ್ದ ಚಿನ್ನ, ಬೆಳ್ಳಿ ಹಾಗೂ 4 ಸಾವಿರ ರೂ. ನಗದನ್ನು ಎಗರಿಸಿ ಪರಾರಿಯಾಗಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!