August 13, 2026

ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿರುದ್ಧದ ವಿಚಾರಣೆ ಡಿ. 20ಕ್ಕೆ ಮುಂದೂಡಿಕೆ

0
IMG-20221212-WA0059.jpg

ನವದೆಹಲಿ: 200 ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿರುದ್ಧದದ ವಿಚಾರಣೆಯನ್ನು ದೆಹಲಿ ನ್ಯಾಯಾಲಯವು ಡಿಸೆಂಬರ್‍ 20ಕ್ಕೆ ಮುಂದೂಡಿದೆ.

ವಿಶೇಷ ನ್ಯಾಯಾಧೀಶ ಶೈಲೇಂದ್ರ ಮಲಿಕ್ ಅವರು, ಜಾರಿ ನಿರ್ದೇಶನಾಲಯದಿಂದ ಚಾರ್ಜ್ ಶೀಟ್ ಮತ್ತು ಇತರ ದಾಖಲೆಗಳ ಸಂಪೂರ್ಣ ಪ್ರತಿಗಳನ್ನು ಇನ್ನೂ ಸ್ವೀಕರಿಸಿಲ್ಲ ಎಂದು ಜಾಕ್ವೆಲಿನ್ ಫರ್ನಾಂಡಿಸ್ ಪರ ವಕೀಲರು ವಾದ ಮಂಡಿಸಿದ ಬಳಿಕ ಪ್ರಕರಣವನ್ನು ಡಿಸೆಂಬರ್ 20ಕ್ಕೆ ಮುಂದೂಡಿಕೆ ಮಾಡಿದ್ದಾರೆ.

ಇನ್ನು ಜಾಕ್ವೆಲಿನ್ ಫರ್ನಾಂಡಿಸ್ ಅವರು ಸಂಕ್ಷಿಪ್ತ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ನವೆಂಬರ್ 15 ರಂದು ನ್ಯಾಯಾಲಯವು ನಟಿಗೆ ಜಾಮೀನು ನೀಡಿತ್ತು.

Leave a Reply

Your email address will not be published. Required fields are marked *

You may have missed

error: Content is protected !!