August 13, 2026

ಪ್ರಧಾನಿ ಮೋದಿ ಕುರಿತು ವಿವಾದಾತ್ಮಕ ಹೇಳಿಕೆ: ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಅರೆಸ್ಟ್

0
IMG-20221213-WA0012.jpg

ನವದೆಹಲಿ: ಸಂವಿಧಾನ ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹತ್ಯೆ ಮಾಡಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾರನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಸಂವಿಧಾನ ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹತ್ಯೆ ಮಾಡಿ ಎಂದು ರಾಜಾ ಪಟೇರಿಯಾ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ರಾಜಾ ವಿರುದ್ಧ ಕ್ರಮಕ್ಕೆ ಬಿಜೆಪಿ ನಾಯಕರು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರಲ್ಲಿ ಮನವಿ ಮಾಡಿದ್ದರು.

ಇನ್ನು ಗೃಹಸಚಿವರು ಹೇಳಿಕೆ ಸಂಬಂಧ ಎಫ್‌ಐಆರ್‌ ದಾಖಲಿಸಲು ಪನ್ನಾ ಪೊಲೀಸ್ ಠಾಣೆಗೆ ಆದೇಶಿಸಿದ್ದು, ಅದರಂತೆ ಮಧ್ಯಪ್ರದೇಶ ಪನ್ನಾ ಜಿಲ್ಲೆ ಪವಯಿ ಠಾಣೆ ಪೊಲೀಸರು ಎಫ್​ಐಆರ್ ದಾಖಲಿಸಿದ್ದು, ಇದೀಗ ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!