March 20, 2026

ನಟ ದುನಿಯಾ ವಿಜಯ್ ವಿರುದ್ದ ಎಫ್ಐಆರ್ ದಾಖಲಿಸಲು ಹೈಕೋರ್ಟ್ ಆದೇಶ

0
IMG-20221213-WA0017.jpg

ಬೆಂಗಳೂರು: ನಟನಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ನಟ ದುನಿಯಾ ವಿಜಯ್ ಅವರ ವಿರುದ್ಧ ಹೈಗ್ರೌಂಡ್ಸ್ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಪಾನಿಪುರಿ ಕಿಟ್ಟಿ ಹಾಗೂ ಸಂಬಂಧಿ ಮಾರುತಿ ಗೌಡರಿಗೆ ಬೆದರಿಕೆ ಹಾಕಿ ಕಾರಿಗೆ ಹಾನಿ ಮಾಡಿದ ಆರೋಪಕ್ಕೆ ವಿಜಯ್ ವಿರುದ್ದ 2018ರಲ್ಲಿ ಪ್ರಕರಣ ದಾಖಲಾಗಿತ್ತು. ಹೈಕೋರ್ಟ್ ಆದೇಶದ ಬಳಿಕ ಹೈಗ್ರೌಂಡ್ಸ್ ಪೊಲೀಸರು ನ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಘಟನೆ ವಿವರ:

ಸೆಪ್ಟೆಂಬರ್ 23, 2018 ರಂದು ವಿಜಯ್ ಮತ್ತು ಅವರ ಮಗ ಸಾಮ್ರಾಟ್ ಬಾಡಿ ಬಿಲ್ಡಿಂಗ್ ಸ್ಪರ್ಧೆಯೊಂದಕ್ಕೆ ತೆರಳಿದ್ದರು. ಕಾರ್ಯಕ್ರಮದಲ್ಲಿ ವಿಜಯ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ದುನಿಯಾ ವಿಜಯ್ ಸ್ಥಳಕ್ಕೆ ತೆರಳುತ್ತಿದ್ದಂತೆಯೇ ಸ್ಥಳದಲ್ಲಿದ್ದ ಮಾರುತಿ ಗೌಡ ಎಂಬಾತ ಕೆಲ ನಿಂದನಾತ್ಮಕ ಮಾತುಗಳನ್ನಾಡಿದ್ದಾನೆ. ಈ ವೇಳೆ ವಿಜಯ್ ಅವರು ಜೀವ ಬೆದರಿಕೆ ಹಾಕಿದ್ದರು ಎಂದು ಹೇಳಲಾಗುತ್ತಿದೆ.

ಏತನ್ಮಧ್ಯೆ, ಆಕ್ರೋಶಗೊಂಡ ನಟನ ಅಭಿಮಾನಿಗಳು ಮಾರುತಿ ಗೌಡರನ್ನು ಸುತ್ತುವರೆದಿದ್ದ, ನಂತರ ವಿಜಯ್ ಅವರನ್ನು ಅವರ ಕಾರಿನಲ್ಲಿ ಕೂರಿಸಿದ್ದಾರೆ. ಆದರೆ, ಮಾರುತಿ ಗೌಡರ ಸಂಬಂಧಿ ಪಾನಿಪುರಿ ಕಿಟ್ಟಿ ತಕ್ಷಣವೇ ಹೈಗ್ರೌಂಡ್ಸ್ ಪೊಲೀಸರನ್ನು ಸಂಪರ್ಕಿಸಿ, ವಿಜಯ್ ಗೌಡನನ್ನು ಅಪಹರಿಸಿದ್ದಾರೆ ಎಂದು ಪ್ರಕರಣ ದಾಖಲಿಸಿದ್ದರು. ಪೊಲೀಸರು ವಿಜಯ್ ಅವರನ್ನು ಸಂಪರ್ಕಿಸಿ ಠಾಣೆಗೆ ಬರುವಂತೆ ಹೇಳುತ್ತಿದ್ದಂತೆ ವಿಜಯ್ ಅವರು ಮಾರುತಿ ಗೌಡ ಅವರನ್ನು ಠಾಣೆಗೆ ಕರೆತಂದಿದ್ದರು.

ಠಾಣೆಗೆ ಪ್ರವೇಶಿಸುವ ಮೊದಲು, ಕಿಟ್ಟಿ ಮತ್ತು ಅವರ ಸಹಾಯಕರು ವಿಜಯ್‌ಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಅಪಹರಣದ ಆರೋಪದ ಮೇಲೆ ವಿಜಯ್ ಮತ್ತು ಇತರ ಮೂವರನ್ನು ಪೊಲೀಸರು ಬಂಧಿಸಿದ್ದರು. ನಂತರ ನಟ ಕಿಟ್ಟಿ, ಮಾರುತಿ ಗೌಡ ಮತ್ತು ಇತರರ ವಿರುದ್ಧ ಪ್ರತಿದೂರು ದಾಖಲಾಗಿತ್ತು. ಆದಾಗ್ಯೂ, ಕಿಟ್ಟಿ ಅವರು ನ್ಯಾಯಾಲಯದ ಮೊರೆ ಹೋಗಿದ್ದರು, ನಂತರ ವಿಜಯ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಂಡಿತ್ತು.ನ್ಯಾಯಾಲಯದ ಆದೇಶವನ್ನು ಕಿಟ್ಟಿ ಅವರು ಪ್ರಶ್ನಿಸಿದ್ದರು. ಇದೀಗ ಎಫ್‌ಐಆರ್ ದಾಖಲಿಸಲು ಹೈಕೋರ್ಟ್ ಸೂಚಿಸಿದೆ

Leave a Reply

Your email address will not be published. Required fields are marked *

error: Content is protected !!