March 20, 2026

ನೆಲ್ಯಾಡಿ: ಕೆರೆಗೆ ಬಿದ್ದು ಪಿಯುಸಿ ವಿದ್ಯಾರ್ಥಿನಿ ಮೃತ್ಯು

0
image_editor_output_image1621176128-1636953647046.jpg

ನೆಲ್ಯಾಡಿ: ಆಕಸ್ಮಿಕವಾಗಿ ಕೆರೆಗೆ ಬಿದ್ದು ಬಾಲಕಿಯೋರ್ವಳು ಮೃತಪಟ್ಟ ಘಟನೆ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ಬೆಳಿಗ್ಗೆ ನಡೆದಿದೆ.

ಮೃತಳನ್ನು ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ(18) ಎನ್ನಲಾಗಿದೆ.

ಶ್ರೇಯಾ ತಮ್ಮ ಮನೆ ಸಮೀಪದ ಕೆರೆಗೆ ತಾವರೆ ಹೂ ಬಿಡಲೆಂದು ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆರೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

ಮನೆಯವರ ಬಳಿ ಕೆರೆಗೆ ತಾವರೆ ಹೂ ಬಿಡಲು ಹೋಗುವುದಾಗಿ ಹೇಳಿಹೋಗಿದ್ದ ಶ್ರೇಯಾ ಹಿಂತಿರುಗಿ ಬರದೇ ಇದ್ದ ಹಿನ್ನೆಲೆಯಲ್ಲಿ ಮನೆಯವರು ಕೆರೆಯ ಕಡೆ ಹೋಗಿ ನೋಡಿದಾಗ ಶ್ರೇಯಾ ಕೆರೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಳು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!