ಲವ್ ಜಿಹಾದ್ ತಡೆಗೆ ಪ್ರತ್ಯೇಕ ಕಾನೂನು ಅಗತ್ಯ ಇಲ್ಲ: ಆರಗ ಜ್ಞಾನೇಂದ್ರ
ಚಿತ್ರದುರ್ಗ: ಮತಾಂತರ ತಡೆ ಕಾಯ್ದೆಯಲ್ಲೇ ಲವ್ ಜಿಹಾದ್ ತಡೆಯುವ ಅಂಶಗಳು ಸೇರಿವೆ. ಹೀಗಾಗಿ ಪ್ರತ್ಯೇಕ ಕಾನೂನು ಅಗತ್ಯ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಂಘ ಪರಿವಾರದ ಕೆಲ ಸಂಘಟನೆಗಳು ಲವ್ ಜಿಹಾದ್ ತಡೆಗೆ ಹೊಸ ಕಾನೂನು ರೂಪಿಸಲು ಒತ್ತಾಯಿಸುತ್ತಿರುವ ಕುರಿತು ಪ್ರತಿಕ್ರಿಯಿಸಿ, ಲವ್ ಜಿಹಾದ್ ತಡೆಗೆ ರಾಜ್ಯದಲ್ಲಿ ಪ್ರತ್ಯೇಕ ಕಾನೂನು ರೂಪಿಸುವ ಹಾಗೂ ವಿಶೇಷ ಕಾರ್ಯಪಡೆ ರಚಿಸುವ ಅಗತ್ಯ ಇಲ್ಲ ಎಂದರು.
ರಾಜ್ಯದಲ್ಲಿ ಜಾರಿಯಲ್ಲಿರುವ ಮತಾಂತರ ನಿಷೇಧ ಕಾಯ್ದೆಯಲ್ಲಿ ಈ ಅಂಶ ಅಡಕವಾಗಿದೆ. ಹೀಗಾಗಿ, ಪ್ರತ್ಯೇಕ ಕಾನೂನು ಅಥವಾ ಕಾರ್ಯಪಡೆಯ ಅಗತ್ಯ ಬರುವುದಿಲ್ಲ. ಆದರೂ, ಈ ವಿಚಾರದಲ್ಲಿ ಪರಿಶೀಲನೆ ನಡೆಸುತ್ತೇವೆ ಎಂದರು.




