ಕಿರುತೆರೆ ನಟಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್
ಬೆಂಗಳೂರು: ಕನ್ನಡ ಸಿನಿಮಾ ಮತ್ತು ಕಿರುತೆರೆ ನಟಿ ಅಭಿನಯಗೆ ಹೈಕೋರ್ಟ್ ಏಕಸದಸ್ಯ ಪೀಠವು ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ನಟಿ ಅಭಿನಯ ಸಹೋದರ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮಿದೇವಿ ಅವರಿಗೆ ವರದಕ್ಷಿಣೆ ಕಿರುಕುಳ ನೀಡಿದರು ಎನ್ನುವ ಕಾರಣಕ್ಕಾಗಿ ವರದಕ್ಷಿಣೆ ಕಿರುಕುಳ ಕೇಸಲ್ಲಿ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ.
ಅಭಿನಯ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ 2002 ರಲ್ಲಿ ಬೆಂಗಳೂರಿನ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಭಿನಯ ಸೇರಿದಂತೆ ಐವರ ಮೇಲೆ ಕೇಸ್ ದಾಖಲಾಗಿತ್ತು. 1998 ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಜೊತೆ ಲಕ್ಷ್ಮೀದೇವಿ ವಿವಾಹವಾಗಿದ್ದರು.
ಮದುವೆ ವೇಳೆ ಶ್ರೀನಿವಾಸ್ ಅವರು 80 ಸಾವಿರ ನಗದು, 250 ಗ್ರಾಂ ಚಿನ್ನಭರಣ ಪಡೆದಿದ್ದರು ಎಂದು ಹೇಳಲಾಗಿತ್ತು. ನಂತರ ಮತ್ತೆ ಒಂದು ಲಕ್ಷ ಹಣ ತರುವಂತೆ ಅಭಿನಯ ಕುಟುಂಬಸ್ಥರಿಂದ ಕಿರುಕುಳ ನೀಡಲಾಗಿತ್ತು ಎಂದು ದೂರು ದಾಖಲಾಗಿತ್ತು.




