March 20, 2026

ಬಂಟ್ವಾಳ: ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಣಕ್ಕೆ ಯತ್ನ, ಸ್ಥಳಕ್ಕೆ ಭೇಟಿ ನೀಡಿದ ತನಿಖೆ ನಡೆಸುತ್ತಿರುವ ಪೊಲೀಸರು

0
image_editor_output_image786082403-1671011812709.jpg

ಬಂಟ್ವಾಳ: ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಣ ಮಾಡಲು ಯತ್ನಿಸಿದ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿದ್ದು, ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ ತನಿಖೆ ನಡೆಸುತ್ತಿದ್ದಾರೆ.

ಡಿ‌.14 ರಂದು ಇಬ್ಬರು ಮಕ್ಕಳು ತಮ್ಮ ಮನೆಯಿಂದ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕುಟ್ಟಿಕಳ ಹಿ.ಪ್ರಾ.ಶಾಲೆಗೆ ಆಗಮಿಸುತ್ತಿದ್ದ ವೇಳೆ ಕಾರೊಂದರಲ್ಲಿ ಬಂದ ವ್ಯಕ್ತಿ ಮಕ್ಕಳ ಅಂಗಿ ಎಳೆಯಲು ಯತ್ನಿಸಿದ್ದು, ಈ ವೇಳೆ ಮಕ್ಕಳ ಅಂಗಿಯ ಗುಬ್ಬಿಗಳು ಎದ್ದು ಹೋಗಿದ್ದರಿಂದ ತಪ್ಪಿಸಿಕೊಳ್ಳಲು ಸಹಕಾರಿಯಾಗಿ ಮಕ್ಕಳು ಬಜಾವ್‌ ಆಗಿದ್ದಾರೆ.

ಘಟನೆಯ ಕುರಿತು ಮಕ್ಕಳು ತಕ್ಷಣ ಪೋಷಕರಿಗೆ ಮಾಹಿತಿ ನೀಡಿದ್ದು, ಬಳಿಕ ಅವರು ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿದ ಪೊಲೀಸರು ಘಟನೆಯ ಸತ್ಯಾಸತ್ಯತೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!