March 20, 2026

ಮಂಗಳೂರು: ಕುಕ್ಕರ್ ಸ್ಫೋಟದ ಆರೋಪಿ ಶಾರೀಕ್ ಚೇತರಿಕೆ: ತನಿಖೆ ಚುರುಕುಗೊಳಿಸಿದ ಎನ್‌ಐಎ

0
photo.JPG

ಮಂಗಳೂರು: ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ನ. 19ರಂದು ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕಿತ ಉಗ್ರ ಮೊಹಮ್ಮದ್‌ ಶಾರೀಕ್‌ ಬಹುತೇಕ ಚೇತರಿಸಿಕೊಂಡಿದ್ದು ಆತನನ್ನು ಎನ್‌ಐಎ ತಂಡ ತೀವ್ರ ವಿಚಾರಣೆಗೊಳಪಡಿಸಿದೆ.

ನ.19ರ ಶನಿವಾರ ಸಂಜೆ ನಾಗುರಿ ಬಳಿ ಆಟೋ ರಿಕ್ಷಾದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಸಂಭವಿಸಿದ ಸಂದರ್ಭ ಗಂಭೀರ ಗಾಯಗೊಂಡಿದ್ದ ಶಾರೀಕ್‌ನನ್ನು ಕಂಕನಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತನ ಶ್ವಾಸಕೋಶದೊಳಗೆ ಹೊಗೆ ತುಂಬಿದ್ದರಿಂದ ಆರೋಗ್ಯ ಹದಗೆಟ್ಟಿತ್ತು. ಆತನ ಕಣ್ಣಿಗೂ ಹಾನಿಯಾಗಿತ್ತು.ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದುದರಿಂದ ಆತನನ್ನು ತನಿಖಾ ತಂಡ ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ.
ಇದೀಗ ಚೇತರಿಸಿಕೊಂಡಿರುವ ಹಿನ್ನೆಲೆಯಲ್ಲಿ ಎನ್‌ಐಎ ತನಿಖೆ ಚುರುಕುಗೊಳಿಸಲಿದ್ದು ಸ್ಪೋಟದ ಹಿಂದಿನ ಆತನ ಉದ್ದೇಶ, ಹಿಂದಿರುವ ಶಕ್ತಿಗಳನ್ನು ಹೊರಗೆಡಹಲಿದೆ
ಇನ್ನು ಘಟನೆಯಲ್ಲಿ ಗಾಯಗೊಂಡಿರುವ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರು ಕೂಡ ಚೇತರಿಸಿಕೊಳ್ಳುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!