March 20, 2026

ವಿಟ್ಲ: ಮಿತ್ತೂರು ರೈಲ್ವೇ ಬ್ರಿಡ್ಜ್ ಬಳಿ ಮಹಿಳೆಯ ಸರ ಕಿತ್ತು ಪರಾರಿಯಾದ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ

0
20221214_183351.jpg

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ರೈಲ್ವೇ ಬ್ರಿಡ್ಜ್ ಬಳಿ ಮಹಿಳೆಯ ಸರ ಕಿತ್ತು ಪರಾರಿಯಾದ ಘಟನೆಗೆ ಸಂಬಂಧಿಸಿ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ಸಿಯಾಗಿದ್ದಾರೆ.

ಕಡೇಶ್ವಾಲ್ಯ ನಿವಾಸಿ ರಮೇಶ್ ಬಂಧಿತ ಆರೋಪಿ.‌
ಮಹಿಳೆಯೊಬ್ಬರು ಪುತ್ತೂರಿನಿಂದ ಬಂದು ಮಿತ್ತೂರಿನಲ್ಲಿ ಬಸ್ಸಿನಿಂದು ಇಳಿದು ಕೋಲ್ಪೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎದುರಿನಿಂದ ಬಿಳಿ ಬಣ್ಣದ ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿ ಸರ ಎಳೆದುಕೊಂಡು ಪರಾರಿಯಾಗಿದ್ದ. ಈ ಬಗ್ಗೆ ಮಹಿಳೆ ವಿಟ್ಲ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ‌ ಪೊಲೀಸ್ ನಿರೀಕ್ಷಕ ನಾಗರಾಜ್ ಎಚ್ ಇ ಅವರ ತಂಡ ಆರೋಪಿಯನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!