September 29, 2026

ಮೈಸೂರು ದಸರಾ ವಸ್ತುಪ್ರದರ್ಶನ‌ ಕಚೇರಿ ಕಟ್ಟಡಕ್ಕೆ ಬೆಂಕಿ

0
image_editor_output_image-434116921-1671080369364.jpg

ಮೈಸೂರು: ದಸರಾ ವಸ್ತುಪ್ರದರ್ಶನ‌ ಆವರಣದಲ್ಲಿರುವ ವಸ್ತುಪ್ರದರ್ಶನ‌ ಪ್ರಾಧಿಕಾರದ ಕಚೇರಿ ಕಟ್ಟಡಕ್ಕೆ ಗುರುವಾರ ಬೆಳಿಗ್ಗೆ ಬೆಂಕಿ ಬಿದ್ದಿದ್ದು, ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.

‘ಕಚೇರಿ ಕಟ್ಟಡಕ್ಕೆ ಹೊಂದಿಕೊಂಡಂತಿರುವ ಮಹಿಳಾ ಮತ್ತು ಮಕ್ಕಳ ವಿಭಾಗದ ಕೊಠಡಿಗೆ ಮುಂಜಾನೆ ಬೆಂಕಿ ಬಿದ್ದಿದ್ದು, ಬೆಳಿಗ್ಗೆ 7.50 ಕ್ಕೆ ಠಾಣೆಗೆ ಕರೆ ಬಂದಿದೆ. ಕಾರ್ಯಾಚರಣೆ ನಡೆಸಲಾಗಿದ್ದು, ಅರ್ಧ ಗಂಟೆಯಲ್ಲಿ ಪರಿಸ್ಥಿತಿ ಹತೋಟಿಗೆ ಬಂದಿದೆ’ ಸರಸ್ವತಿಪುರಂನ ಅಗ್ನಿಶಾಮಕ ದಳದ ಅಧಿಕಾರಿ ರಾಜು ‘ಪ್ರಜಾವಾಣಿ’ಗೆ ತಿಳಿಸಿದರು‌.

 

‘ಯಾವುದೇ ಪ್ರಾಣಹಾನಿಯಾಗಿಲ್ಲ. ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ’ ಎಂದರು.

Leave a Reply

Your email address will not be published. Required fields are marked *

You may have missed

error: Content is protected !!