February 4, 2026

ನಿಯಂತ್ರಣ ತಪ್ಪಿದ ಕಾರು ಸೇತುವೆಗೆ ಢಿಕ್ಕಿ: ಮೂವರು ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ

0
image_editor_output_image1914232011-1671080549736.jpg

ತುಮಕೂರು: ತುಮಕೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ಮೂವರು ಸಾವನ್ನಪ್ಪಿದ್ದಾರೆ. ಅತೀ ವೇಗವಾಗಿ ಬಂದ ಕಾರೊಂದು ಚಾಲನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿಯಾಗಿ ಕೆಳಗೆ ಬಿದ್ದಿದೆ.

ಭೀಕರ ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಯಾವ ಕಂಪನಿಯ ಕಾರು ಎಂಬುದು ಪತ್ತೆ ಮಾಡಲು ಅಸಾಧ್ಯವಾಗಿದೆ. ತುಮಕೂರಿನ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ ಮತ್ತೊಬ್ಬರು ಆಸ್ಪತ್ರೆಗೆ ಸಾಗಿರುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಕಾರಿನಲ್ಲಿ ಚಾಲಕ ಸೇರಿ ಐದು ಮಂದಿ ಪ್ರಯಾಣಿಸುತ್ತಿದ್ದು ಮೂವರು ಮೃತಪಟ್ಟಿದ್ದಾರೆ. ಮತ್ತಿಬ್ಬರ ಪರಿಸ್ಥಿತಿ ಗಂಭೀರವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!