February 4, 2026

ಮಂಗಳೂರು: ಹೆಡ್ ಕಾನ್ ಸ್ಟೇಬಲ್ ಹೃದಯಾಘಾತದಿಂದ ನಿಧನ

0
image_editor_output_image-1740725841-1671085075242.jpg

ಮಂಗಳೂರು: ಹೆಡ್ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾವೂರು ಠಾಣೆಯ ಹನುಮಂತ ಲಮಾಣಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

2008 ರ ಬ್ಯಾಚ್ ನಲ್ಲಿ ಸೇವೆಗೆ ಸೇರ್ಪಡೆಗೊಂಡಿದ್ದ ಇವರು ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದವರಾಗಿದ್ದು, ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಮಂಗಳೂರು ಕಮಿಷನರೆಟ್ ವ್ಯಾಪ್ತಿಯ ಮೂಲ್ಕಿ, ಉತ್ತರ ಸಂಚಾರ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು, ವಿಶೇಷ ಕರ್ತವ್ಯದಡಿ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಮೃತರು ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!