February 3, 2026

ಬಿಎಸ್‌ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ  ನೇಣುಬಿಗಿದು ಆತ್ಮಹತ್ಯೆ

0
image_editor_output_image1958968392-1671156894861.jpg

ಬೆಂಗಳೂರು: ಖಾಸಗಿ ಕಾಲೇಜೊಂದರಲ್ಲಿ ಬಿಎಸ್‌ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾಗಿರುವ ಯುವತಿಯನ್ನು ಪಶ್ಚಿಮ ಬಂಗಾಳ ಮೂಲದ ರಮಿತಾ ರಾಯ್ ಎಂದು ಗುರುತಿಸಲಾಗಿದೆ. ರಮಿತಾ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯೊಂದರಲ್ಲಿ ವಾಸವಿದ್ದಳು.

ಆಕೆ ವಾಸವಿದ್ದ ಮನೆಯಲ್ಲಿಯೇ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಆಕೆಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!