February 3, 2026

ಮಂಗಳೂರು: ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಮುಹಮ್ಮದ್ ಫಾರೂಕ್ ಹೃದಯಾಘಾತದಿಂದ ನಿಧನ

0
image_editor_output_image-325526195-1671166470481.jpg

ಮಂಗಳೂರು: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್ ಅವರ ಸಹೋದರ, ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಮುಹಮ್ಮದ್ ಫಾರೂಕ್ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.

ವಕೀಲರಾಗಿದ್ದ ಫಾರೂಕ್ ಅವರಿಗೆ 49 ವರ್ಷ ವಯಸ್ಸಾಗಿತ್ತು. ಇವರು ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದಾರೆ.

ಇದೀಗ ಹೈಕೋರ್ಟ್ ವಕೀಲರಾಗಿರುವ ಅವರು ಬೆಂಗಳೂರಿನಲ್ಲಿ ನೆಲೆಸಿದ್ದರು. ಅವರ ಮೃತದೇಹವನ್ನು ಮೂಡಬಿದಿರೆಗೆ ತಂದು ಅಂತ್ಯ ಕ್ರಿಯೆ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.

ಇವರ ನಿಧನಕ್ಕೆ ಬಿಜೆಪಿ ಸಂತಾಪ ಸೂಚಿಸಿದ್ದು, ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷರು ಹಾಗೂ ಬೆಂಗಳೂರು ಸಂಘಟನಾತ್ಮಕ ಪ್ರಭಾರಿಗಳಾದ ಶ್ರೀ ಮೊಹಮ್ಮದ್‌ ಫಾರೂಕ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಎಂದು ಹೇಳಿದೆ.

Leave a Reply

Your email address will not be published. Required fields are marked *

error: Content is protected !!