ಪುತ್ತೂರು: ಹಾರಾಡಿ ಶಾಲಾ ಬಳಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರು ಢಿಕ್ಕಿ
ಪುತ್ತೂರು: ಹಾರಾಡಿ ಶಾಲಾ ಬಳಿ ರಸ್ತೆ ದಾಟುತ್ತಿದ್ದ ಹಾರಾಡಿ ಶಾಲೆಯ ವಿದ್ಯಾರ್ಥಿಯೊಬ್ಬರಿಗೆ ಕಾರು ಡಿಕ್ಕಿಯಾದ ಘಟನೆ ಡಿ.16 ರಂದು ನಡೆದಿದ್ದು, ಕಾರು ಶಾಸಕರಿಗೆ ಸೇರಿದ್ದು ಎನ್ನಲಾಗಿದೆ.
ಹಾರಾಡಿ ಶಾಲಾ ವಿದ್ಯಾರ್ಥಿ ಶಾಲೆಯ ಬಳಿ ರಸ್ತೆ ದಾಟುತ್ತಿದ್ದ ವೇಳೆ ಉಪ್ಪಿನಂಗಡಿ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಕಾರು ಆತನಿಗೆ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.




