June 27, 2026

ಮುಂಬೈನ 6 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಓರ್ವ ಮೃತ್ಯು, ಅನೇಕ ಮಂದಿಗೆ ಗಾಯ

0
IMG-20221217-WA0013.jpg

ಮುಂಬೈ: ಬೆಂಕಿ ಅನಾಹುತ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿ, 20ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಮುಂಬೈನ ಘಾಟ್‌ಕೋಪರ್‌ನಲ್ಲಿರುವ ಪಾರೇಖ್ ಆಸ್ಪತ್ರೆ ಬಳಿ ಸಂಭವಿಸಿದೆ.

ಮೃತರನ್ನು ಖುರ್ಷಿ ದೇಧಿಯಾ ಎಂದು ಗುರುತಿಸಲಾಗಿದೆ.

ಗಾಯಗೊಂಡ ಮೂವರ ಪೈಕಿ ಒಬ್ಬರನ್ನು ರಾಜವಾಡಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಫಲಿಸದೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಇನ್ನು ಘಾಟ್‌ಕೋಪರ್ ಪೂರ್ವ ಪ್ರದೇಶದಲ್ಲಿರುವ ಗ್ರೌಂಡ್ ಪ್ಲಸ್ ಆರು ಅಂತಸ್ತಿನ ‘ವಿಶ್ವಾಸ್’ ಕಟ್ಟಡದ ವಿದ್ಯುತ್ ಮೀಟರ್ ಕೋಣೆಯಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಪೊಲೀಸರು ಸೇರಿಂದತೆ ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ತೆರಳಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!