July 6, 2026

ಪಾಕ್‌ನ ಪೀಪಲ್ಸ್ ಪಾರ್ಟಿ ನಾಯಕಿಯಿಂದ ‘ಭಾರತಕ್ಕೆ ಪರಮಾಣು ಯುದ್ಧದ ಬೆದರಿಕೆ’

0
IMG-20221218-WA00131.jpg

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಅನಾಗರಿಕ ಆಕ್ರೋಶಕ್ಕಾಗಿ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಅವರನ್ನು ಭಾರತ ತೀವ್ರವಾಗಿ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದು, ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ನಾಯಕಿ ಶಾಜಿಯಾ ಮಾರಿ ಭಾರತಕ್ಕೆ ಪರಮಾಣು ಯುದ್ಧದ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ.

ಶಾಜಿಯಾ ಮಾರಿ ಪ್ರತಿಕ್ರಿಯಿಸಿ, ಪಾಕಿಸ್ತಾನದ ಬಳಿ ಅಣುಬಾಂಬ್ ಇದೆ ಎಂಬುದನ್ನು ಭಾರತ ಮರೆಯಬಾರದು. ನಮ್ಮ ಪರಮಾಣು ಸ್ಥಿತಿಯು ಮೌನವಾಗಿರಲು ಉದ್ದೇಶಿಸಿಲ್ಲ. ಅಗತ್ಯ ಬಿದ್ದರೆ ನಾವು ಹಿಂದೆ ಸರಿಯುವುದಿಲ್ಲ ಎಂದಿದ್ದಾರೆ.

‘ಒಸಾಮಾ ಬಿನ್ ಲಾಡೆನ್ ಸತ್ತಿದ್ದಾನೆ. ಆದರೆ ಗುಜರಾತ್‌ನ ಕಟುಕ ಬದುಕಿದ್ದಾನೆ ಮತ್ತು ಅವನು ಭಾರತದ ಪ್ರಧಾನಿ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಹೇಳಿಕೆ ನೀಡಿದ್ದು, ಈ ಹೇಳಿಕೆಯನ್ನು ವಿರುದ್ದ ಭಾರತ ತೀವ್ರವಾಗಿ ಖಂಡಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!