ಗ್ರಾ.ಪಂ ಅಧ್ಯಕ್ಷರ, ಉಪಾಧ್ಯಕ್ಷರ, ಸದಸ್ಯರು ಗೌರವಧನ ಹೆಚ್ಚಿಸಿ ಸರಕಾರ ಆದೇಶ
ಬೆಂಗಳೂರು: ಗ್ರಾಮ ಪಂಚಾಯತ್ ಅಧ್ಯಕ್ಷರ, ಉಪಾಧ್ಯಕ್ಷರ ಹಾಗೂ ಸದಸ್ಯರ ಮಾಸಿಕ ಗೌರವಧನವನ್ನು ಎರಡು ಪಟ್ಟು ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಈವರೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ 3000 ರೂ, ಉಪಾಧ್ಯಕ್ಷರಿಗೆ 2000 ರೂ ಹಾಗೂ ಹಾಗೂ ಸದಸ್ಯರಿಗೆ 1 ಸಾವಿರ ರೂ ಗೌರವಧನ ನೀಡಲಾಗುತ್ತಿತ್ತು.
ಇದೀಗ ಅಧ್ಯಕ್ಷರಿಗೆ 2 ಸಾವಿರ ಹೆಚ್ಚಿಸಿ 6 ಸಾವಿರ ರೂ, ಉಪಾಧ್ಯಕ್ಷರಿಗೆ 4 ಸಾವಿರ ರೂ ಹಾಗೂ ಸದಸ್ಯರಿಗೆ 2 ಸಾವಿರ ರೂ ನಿಗದಿಪಡಿಸಿ ಸರ್ಕಾರ ಆದೇಶ ಹೊರಡಿಸಿದೆ.





