February 2, 2026

ಫಿಫಾ ವಿಶ್ವಕಪ್: ಅರ್ಜೆಂಟೀನ ಚಾಂಪಿಯನ್

0
Screenshot_2022-12-18-23-39-18-65_680d03679600f7af0b4c700c6b270fe7.jpg

ದೋಹಾ: ಫಿಫಾ ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಫ್ರಾನ್ಸ್ ತಂಡವನ್ನು ಪೆನಾಲ್ಟಿ ಶೂಟೌಟ್‌ನಲ್ಲಿ 4-2 ಅಂತರದಿಂದ ಮಣಿಸಿದ ಅರ್ಜೆಂಟೀನ ತಂಡ 36 ವರ್ಷಗಳ ಪ್ರಶಸ್ತಿ ಬರ ನೀಗಿಸಿಕೊಂಡಿತು. ಪಂದ್ಯದಲ್ಲಿ ಮಿಂಚಿದ ಸ್ಟಾರ್ ಆಟಗಾರ ಲಿಯೊನೆಲ್ ಮೆಸ್ಸಿ ತನ್ನ ದೀರ್ಘಕಾಲದ ವಿಶ್ವಕಪ್ ಕನಸನ್ನು ಈಡೇರಿಸಿಕೊಂಡರು.

ರವಿವಾರ ಲುಸೈಲ್ ಸ್ಟೇಡಿಯಮ್‌ನಲ್ಲಿ ರೋಚಕವಾಗಿ ಸಾಗಿದ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಉಭಯ ತಂಡಗಳು 120 ನಿಮಿಷಗಳ ಆಟದಲ್ಲಿ 3-3 ರಿಂದ ಸಮಬಲ ಸಾಧಿಸಿದ ಹಿನ್ನೆಲೆಯಲ್ಲಿ ಪೆನಾಲ್ಟಿ ಶೂಟೌಟ್ ಮೊರೆ ಹೋಗಲಾಯಿತು.

Leave a Reply

Your email address will not be published. Required fields are marked *

error: Content is protected !!