ಕರ್ತವ್ಯ ಲೋಪ: ಎಸ್ಸೈ ಗೀತಾಂಜಲಿ ಶಿಂಧೆ ಅಮಾನತು
ರಾಯಚೂರು: ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ರಾಯಚೂರಿನ ಸಿರವಾರ ಠಾಣೆಯ ಪಿಎಸ್‌ಐ ಗೀತಾಂಜಲಿ ಶಿಂಧೆ ಅವರನ್ನ ಅಮಾನತುಗೊಳಿಸಲಾಗಿದೆ.
ಪಿಎಸ್‌ಐ ವಿರುದ್ಧ ವಿವಿಧ ಆರೋಪಗಳು ಕೇಳಿಬರುತ್ತಿದ್ದು, ಕೆಲವರು ಖುದ್ದಾಗಿ ಜಿಲ್ಲಾ ಎಸ್ಪಿಗೆ ದೂರು ನೀಡಿದ್ದರು. ಹಾಗಾಗಿ ಕರ್ತವ್ಯಲೋಪ ಆರೋಪದ ಮೇಲೆ ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಆದೇಶ ಹೊರಡಿಸಿದ್ದಾರೆ.




