ಖಾಸಗಿ ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು: ಇತ್ತೀಚೆಗೆ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ ಹೆಚ್ಚಾಗುತ್ತಿದೆ. ಆ ಸಾಲಿಗೆ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ.
ವಿವಿ ಪುರಂನಲ್ಲಿರುವ ಖಾಸಗಿ ಕಾಲೇಜು ಕಟ್ಟಡದ 6ನೇ ಮಹಡಿಯಿಂದ ಜಿಗಿದು ವಾಣಿ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾನೂನು ವಿಭಾಗದ ವಿದ್ಯಾರ್ಥಿನಿಯಾಗಿದ್ದ ತ್ಯಾಗರಾಜನಗರದ ನಿವಾಸಿ ವಾಣಿ ಆತ್ಮಹತ್ಯೆಗೆ ಎಂಗೇಜ್ಮೆಂಟ್ ಬ್ರೇಕಪ್ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.




