February 2, 2026

ಕುಂದಾಪುರ: ಪರವಾನಿಗೆ ಇಲ್ಲದೆ ಮರಳು ಸಾಗಾಟ: ಎರಡು ಟಿಪ್ಪರ್ ಲಾರಿಗಳ ವಶಕ್ಕೆ

0
image_editor_output_image-2089220692-1671507019443.jpg

ಕುಂದಾಪುರ: ತಾಲೂಕಿನ ತ್ರಾಸಿ ಗ್ರಾಮದ ಮೊವಾಡಿ ಪರಿಸರದಲ್ಲಿ ಪರವಾನಿಗೆ ರಹಿತವಾಗಿ ಮರಳು ಸಾಗಾಟ ನಡೆಸುತ್ತಿರುವುದನ್ನು ಪತ್ತೆಹಚ್ಚಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ಮರಳು ಸಾಗಿಸುತ್ತಿರುವ ಎರಡು ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ತ್ರಾಸಿ ಪರಿಸರದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಹಾಗೂ ಪರವಾನಿಗೆ ರಹಿತವಾಗಿ ಮರಳು ಸಾಗಾಟ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ದೂರು ಬಂದ ಹಿನ್ನೆಲೆಯಲ್ಲಿ ಇಲಾಖೆಯ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ. ಯು ಅವರ ಮಾರ್ಗದರ್ಶನದಲ್ಲಿ ಸೋಮವಾರ (ಡಿ.19) ಅಪರಾಹ್ನ 12:30ರ ಸುಮಾರಿಗೆ ಭೂವಿಜ್ಞಾನಿ ಸಂಧ್ಯಾ ಅವರು ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮದ ಮೋವಾಡಿ ಪರಿಸರದಲ್ಲಿ ಕಾರ್ಯಾಚರಣೆ ನಡೆಸಿ ಪರವಾನಿಗೆ ರಹಿತವಾಗಿ ಮರಳು ಸಾಗಾಣಿಕೆ ನಡೆಸುತ್ತಿದ್ದ ಮರಳು ಸಹಿತ 2 ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಭೂವಿಜ್ಞಾನಿ ಅವರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮಕೈಗೊಳ್ಳುವವರಿಗೆ ಅನಧಿಕೃತ ಮರಳು ಸಾಗಾಣಿಕೆಗೆ ಬಳಸುತ್ತಿದ್ದ ಲಾರಿಗಳನ್ನು ಗಂಗೊಳ್ಳಿ ಪೊಲೀಸ್ ಠಾಣೆ ಸುಪರ್ದಿಯಲ್ಲಿ ಇರಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!