July 6, 2026

ಮೈಸೂರು: ತಾಯಿಯ ಅಕ್ರಮ ಸಂಬಂಧದಿಂದ ಮನನೊಂದು ಯುವಕ ಆತ್ಮಹತ್ಯೆ

0
IMG-20221220-WA0026.jpg

ಮೈಸೂರು: ನಂಜನಗೂಡು ತಾಲ್ಲೂಕಿನ ಹುಣಸನಾಳು ಗ್ರಾಮದಲ್ಲಿ ತಾಯಿಯ ಅಕ್ರಮ ಸಂಬಂಧದಿಂದ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಮಹೇಂದ್ರ (20) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ.

ತನ್ನ ತಾಯಿಯ ಅಕ್ರಮ ಸಂಬಂಧದ ವಿಚಾರವಾಗಿ ಆಗಾಗ್ಗೆ ಮನೆಯಲ್ಲಿ ತಂದೆ-ತಾಯಿ ನಡುವೆ ಗಲಾಟೆ ಆಗುತ್ತಿತ್ತು. ಇದರಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ ಮಹೇಂದ್ರ ನೇಣಿಗೆ ಶರಣಾಗಿದ್ದಾನೆ.

ವಿಷಯ ತಿಳಿದು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!