July 6, 2026

ಬೆಳ್ತಂಗಡಿ: ಸಿದ್ದರಾಮಯ್ಯ ಅತಿಥಿಯಾಗಿದ್ದ ಕಾರ್ಯಕ್ರಮದಲ್ಲೇ ಅನ್ಯಕೋಮಿನ ವಿದ್ಯಾರ್ಥಿಗಳಿಂದ ಅಸಭ್ಯ ವರ್ತನೆ: ಇಬ್ಬರು ವಿದ್ಯಾರ್ಥಿಗಳು ಅಮಾನತು

0
IMG-20221222-WA0012.jpg

ಬೆಳ್ತಂಗಡಿ: ಸಿದ್ದರಾಮಯ್ಯ ಅತಿಥಿಯಾಗಿದ್ದ ಕಾರ್ಯಕ್ರಮದಲ್ಲೇ ಅಸಭ್ಯ ವರ್ತನೆ ತೋರಿದ್ದು, ಕಾಲೇಜಿನ ಅನ್ಯಕೋಮಿ ವಿದ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಲಾಗಿರುವ ಘಟನೆ ನಡೆದಿದೆ.

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ಮಾಜಿ ಶಾಸಕ ವಸಂತ ಬಂಗೇರಾ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅತಿಥಿಯಾಗಿದ್ದರು. ಕಾರ್ಯಕ್ರಮದ ವೇಳೆ ಕಾಲೇಜು ಅವರಣದಲ್ಲಿ ಅನ್ಯಕೋಮಿನ ವಿದ್ಯಾರ್ಥಿಗಳು ಹಗ್ ಮಾಡಿ ಕಿಸ್ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗಿದ್ದು, ಬಳಿಕ ಮುಸ್ಲಿಂ ವಿದ್ಯಾರ್ಥಿಗೆ ಹಿಂದೂ ಕಾರ್ಯಕರ್ತರು ಧಮ್ಕಿ ಹಾಕಿ ಜೀವ ಬೆದರಿಕೆ ಹಾಕಿದ್ದಾರೆ.

ಇನ್ನು ಮತ್ತೊಂದೆಡೆ ಹಿಂದೂ ವಿದ್ಯಾರ್ಥಿನಿ ಸಸ್ಪೆಂಡ್ ಮಾಡಿ, ಮುಸ್ಲಿಂ ವಿದ್ಯಾರ್ಥಿಯನ್ನು ಸಸ್ಪೆಂಡ್ ಮಾಡಿಲ್ಲ ಎಂಬ ಚರ್ಚೆ ನಡೆಯುತ್ತಿದೆ.

ಕೋಮುದ್ವೇಷದ ಹಿನ್ನಲೆಯಲ್ಲಿ ಚರ್ಚೆ ಹುಟ್ಟಿಕೊಂಡಿದ್ದು, ಸದ್ಯ ಕಾಲೇಜು ಆಡಳಿತ ಮಂಡಳಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಚರ್ಚೆ ಮಾಡುತ್ತಿರುವವರ ಬಗ್ಗೆ ತನಿಖೆ ನಡೆಸುವಂತೆ ಮನವಿ ಮಾಡಿದ್ದು, ಅ ಇಬ್ಬರನ್ನೂ ಸಸ್ಪೆಂಡ್ ಮಾಡಿದ್ದಾಗಿ ಆಡಳಿತ ಮಂಡಳಿ ದೂರಿನಲ್ಲಿ ಉಲ್ಲೇಖಿಸಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!