February 4, 2026

‘ಜಿಡಿಪಿಯಲ್ಲಿ ಮಂಗಳೂರಿಗೆ ಎರಡನೇ ಸ್ಥಾನ’: ನಳಿನ್ ಕುಮಾರ್ ಕಟೀಲು

0
IMG-20221222-WA0022.jpg

ಮಂಗಳೂರು: ಆರ್ಥಿಕ ಪ್ರಗತಿಯ ಅಳತೆಗೋಲಾದ ಒಟ್ಟು ದೇಶಿಯ ಉತ್ಪಾದನೆ (ಜಿಡಿಪಿ)ಯಲ್ಲಿ ರಾಜ್ಯದಲ್ಲಿಯೇ ಮಂಗಳೂರು ಎರಡನೇ ಸ್ಥಾನದಲ್ಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

ಡಿಸೆಂಬರ್ 22ರ ಗುರುವಾರ ನಗರದ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ 3ನೇ ತ್ರೈಮಾಸಿಕ ಪರಿಶೀಲನಾ ಸಮಿತಿ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಾಣಿಜ್ಯ ಚಟುವಟಿಕೆಗಳು ಹೆಚ್ಚಿರುವ ಹುಬ್ಬಳ್ಳಿ ಅಥವಾ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿರುವ ಮೈಸೂರಿಗಿಂತಲೂ ಜಿಡಿಪಿಯಲ್ಲಿ ಮಂಗಳೂರು ಎರಡನೇ ಸ್ಥಾನದಲ್ಲಿರುವುದಕ್ಕೆ ನಾಗರೀಕರು, ಉದ್ದಿಮೇದಾರರು, ಬ್ಯಾಂಕರುಗಳು, ಛೆಂಬರ್ ಆಫ್ ಕಾಮರ್ಸ್‌ನವರು ಕಾರಣರಾಗಿದ್ದಾರೆ ಎಂದರು.

ಬ್ಯಾಂಕ್‌ಗಳ ಮೂಲಕ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿಗದಿತ ಗುರಿ ತಲುಪದ ಬ್ಯಾಂಕ್‌ಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಆ ಬ್ಯಾಂಕ್‌ಗಳಲ್ಲಿ ಸರ್ಕಾರದ ಹಣವಿದ್ದಲ್ಲಿ ಕೂಡಲೇ ಅದನ್ನು ತೆಗೆದು ಇತರೆ ಬ್ಯಾಂಕ್‌ಗಳಲ್ಲಿ ಇರಿಸುವಂತೆ ಜಿಲ್ಲಾಧಿಕಾರಿಯವರಿಗೆ ಈ ವೇಳೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಮಾತನಾಡಿ, ತಲಾ ಆದಾಯದಲ್ಲೂ ಮಂಗಳೂರು ರಾಜ್ಯದಲ್ಲಿಯೇ ಎರಡನೇ ಸ್ಥಾನ ಪಡೆದಿದೆ. ಕೈಗಾರಿಕೆಗಳು, ಉದ್ದಿಮೆಗಳು, ಹತ್ತು ಹಲವಾರು ವಾಣಿಜ್ಯ ಚಟುವಟಿಕೆಗಳು ಸೇರಿದಂತೆ ವಿವಿಧ ಕಾರಣಗಳಿಂದ ಇದು ಸಾಧ್ಯವಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ರಿಜರ್ವ್ ಬ್ಯಾಂಕ್ ಆಫ್ ಇಂಡಿಯಾದ ಎಜಿಎಂ ಪಿ. ಬಿಸ್ವಾಸ್, ನಬಾರ್ಡ್‌ನ ಡಿಡಿಎಂ ಸಂಗೀತಾ ಎಸ್. ಕರ್ತ, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರವೀನ್ ಎಂ.ಪಿ. ವೇದಿಕೆಯಲ್ಲಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಲೀಡ್ ಬ್ಯಾಂಕ್ ವತಿಯಿಂದ ಸಿದ್ದಪಡಿಸಲಾಗದ ಸರ್ಕಾರಿ ಸೌಲಭ್ಯಗಳ ಮಾಹಿತಿಯುಳ್ಳ ಗ್ಲಿಂಪ್ಸ್ ಆಫ್ ಗವರ್ನಮೆಂಟ್ ಸ್ಪಾನ್‌ರ್ಸಡ್ ಸ್ಕೀಮ್ಸ್‌ ಎಂಬ ಹೊತ್ತಿಗೆಯನ್ನು ಸಂಸದರು ಬಿಡುಗಡೆ ಮಾಡಿದರು.

ಇದೇ ವೇಳರ್ಮ್ಸ್‌ಡ್‌ನ 2023-24ನೇ ಸಾಲಿನ ಪೋಟೆಷಿಯಲ್ ಲಿಂಕ್ಡ್ ಕ್ರಡಿಟ್ ಪ್ಲಾನ್ (ಪಿಎಲ್‌ಪಿ) ಪುಸ್ತಕವನ್ನು ಅನಾವರಣಗೊಳಿಸಲಾಯಿತು.

ಪಿಎಂಇಜಿಪಿ (ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಯೋಜನೆ) ಯೋಜನೆಯ ಅನುಷ್ಠಾನದಲ್ಲಿ 2021-22ನೇ ಸಾಲಿನಲ್ಲಿ ಜಿಲ್ಲೆ ರಾಜ್ಯದಲ್ಲಿ ತೃತೀಯ ಸ್ಥಾನ ಪಡೆದಿದೆ. ಆ ಆರ್ಥಿಕ ವರ್ಷದಲ್ಲಿ ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಲ ನೀಡಿದ ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪ್ರಮುಖರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

Leave a Reply

Your email address will not be published. Required fields are marked *

You may have missed

error: Content is protected !!