ಮಂಗಳೂರು: ಫೆ.11ರಂದು ರಾಷ್ಟ್ರೀಯ ಲೋಕ್ ಅದಾಲತ್
ಮಂಗಳೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಜ್ಯಾದ್ಯಾಂತ 2023ರ ಫೆಬ್ರವರಿ 11ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.
ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಪರಿಹಾರ ಕಂಡುಕೊಳ್ಳಲು ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು.
ಸಾರ್ವಜನಿಕರಿಗೆ ಇದು ಸುವರ್ಣಾವಕಾಶವಾಗಿದ್ದು, ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ವಿಳಾಸ:www.kslsa.kar.nic.in ಅಥವಾ ಟೋಲ್ ಫ್ರೀ ಸಂಖ್ಯೆ:1800-425-90900 ಅನ್ನು ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




