February 4, 2026

ಬೆಳ್ತಂಗಡಿ: ಶಬರಿಮಲೆಗೆ ಹೊರಟ ಮಿನಿ ಬಸ್ ಮುಂಡಾಜೆ ಬಳಿ ಬ್ರೇಕ್ ಫೇಲ್: ಹಲವರಿಗೆ ಗಾಯ

0
image_editor_output_image-1427138113-1671770661062.jpg

ಬೆಳ್ತಂಗಡಿ: ಬಳ್ಳಾರಿಯಿಂದ ಶಬರಿಮಲೆಗೆ ಹೊರಟ ಮಿನಿ ಬಸ್ ಮುಂಡಾಜೆಯ ಉಳ್ಳಾಲ್ತಿ ಕಟ್ಟೆ ಬಳಿ ಬ್ರೇಕ್ ಫೇಲ್ ಆಗಿ ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದ ಪರಿಣಾಮ ಹಲವರಿಗೆ ಗಾಯಗಳಾಗಿವೆ.ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆರಂಭಿಕ ಮಾಹಿತಿ ಬಂದಿದೆ.

ಡಿ.23 ರ ಬೆಳಗ್ಗೆ ಈ ಘಟನೆ ಸಂಭವಿಸಿದ್ದು ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲೂಕಿನಿಂದ ಇವರು ಶಬರಿಮಲೆಗೆ ಯಾತ್ರೆ ಹೊರಟವರಾಗಿದ್ದು ವಾಹನದಲ್ಲಿ ಒಟ್ಟು 21 ಜನ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.ಗಾಯಾಳುಗಳನ್ನು ಶಶಿ, ಜಲಾಧರ, ರಘು, ಬಸವರಾಜ್ ಮತ್ತು ಲೋಕ ಎಂದು ಗುರುತಿಸಲಾಗಿದೆ.

ಅಪಘಾತ ನಡೆದ ಜಾಗ ಇಳಿಜಾರಾಗಿದ್ದು, ವಾಹನದ ಬ್ರೇಕ್ ಕೈ ಕೊಟ್ಟಿದೆ ಎಂದು ತಿಳಿದೊಡನೆಯೇ ಅದರ ಚಾಲಕ ಸಮಯಪ್ರಜ್ಞೆ ಮೆರೆದಿದ್ದು ವಾಹನವನ್ನು ರಸ್ತೆ ಪಕ್ಕದ ಪೊದೆಯ ಕಡೆಗೆ ಚಲಿಸುವಂತೆ ಮಾಡಿ ನಿಯಂತ್ರಣಕ್ಕೆ ತಂದಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿ ಒಂದು ಕಡೆ ಆಳ ಕಂದಕ, ಇನ್ನೊಂದೆಡೆ ವಿದ್ಯುತ್ ಕಂಬ ಇದ್ದು ಸ್ವಲ್ಪ ಎಚ್ಚರ ತಪ್ಪಿದ್ದರೂ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು.

Leave a Reply

Your email address will not be published. Required fields are marked *

error: Content is protected !!