ಬಂಟ್ವಾಳ: ಒಬ್ಬಂಟಿಯಾಗಿ ಮನೆಯಲ್ಲಿದ್ದ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿ ದರೋಡೆ
ಬಂಟ್ವಾಳ: ಒಬ್ಬಂಟಿಯಾಗಿ ಮನೆಯಲ್ಲಿದ್ದ ವೇಳೆ ಮಹಿಳೆಯೊರ್ವಳನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ ಬಳಿಕ ಮನೆ ದರೋಡೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಡೆಕಾನ ಎಂಬಲ್ಲಿ ಡಿ.22 ರಂದು ಗುರುವಾರ ಸಂಜೆ ಸುಮಾರು 7 ಗಂಟೆ ವೇಳೆಗೆ ನಡೆದಿದೆ.
ಬರಿಮಾರು ಗ್ರಾಮದ ಕಡೆಕನ ನಿವಾಸಿ ರೋಹಿತ್ ಎಂಬವರ ಪತ್ನಿ ಪವಿತ್ರ ಎಂಬಾಕೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಮನೆಯಿಂದ ರಾಬರಿ ಮಾಡಲಾಗಿದೆ ಎಂಬ ದೂರು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದಾಖಲಾಗಿದೆ.




