ಚಿಪ್ಸ್ ಕೊಟ್ಟು ಪುಸಲಾಯಿಸಿ ಮಗುವಿನ ಮೇಲೆ ಅತ್ಯಾಚಾರ: ಆರೋಪಿಯ ಬಂಧನ
ಬೆಂಗಳೂರು: ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಯೊಬ್ಬ ಮಗುವಿನ ಮೇಲೆ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದೆ.
ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಬ್ಯಾಲದಕೆರೆಯಲ್ಲಿ ಘಟನೆ ನಡೆದಿದೆ. ಪೈಂಟರ್ ಕೆಲಸ ಮಾಡಿಕೊಂಡಿರುವ ಉತ್ತರ ಪ್ರದೇಶ ಮೂಲದ ಮನೀಶ್ ಎಂಬಾತ ಈ ಕೃತ್ಯ ಎಸಗಿದ್ದಾನೆ.
ಚಿಪ್ಸ್, ಬಾಳೆಹಣ್ಣು ಕೊಟ್ಟು ಮಗುವನ್ನು ಪುಸಲಾಯಿಸಿ ನಂತರ ಅತ್ಯಾಚಾರ ಎಸಗಿದ್ದಾನೆ. ಮಗು ತೀವ್ರ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.






