December 16, 2025

ಅಂಗನವಾಡಿ ಕೇಂದ್ರದ ಆವರಣದಲ್ಲಿ ಹಾವು ಕಚ್ಚಿ ಬಾಲಕ ಸಾವು

0
image_editor_output_image-870100144-1671853311041.jpg

ಹಾಸನ : ಅಂಗನವಾಡಿ ಕೇಂದ್ರದ ಆವರಣದಲ್ಲಿ ಹಾವು ಕಚ್ಚಿ ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡಕಲ್ಲೂರು ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕನನ್ನು ರೋಷನ್ (4) ಎಂದು ಗುರುತಿಸಲಾಗಿದೆ. ಅಂಗನವಾಡಿ ಸಹಾಯಕಿ ಮಕ್ಕಳನ್ನು ಕರೆ ತರಲು ಮನೆಗಳಿಗೆ ಹೋದಾಗ ಈ ಘಟನೆ ನಡೆದಿದೆ.

ದೊಡ್ಡಕಲ್ಲೂರು ಗ್ರಾಮದ ಯಶವಂತ್-ಗೌರಿ ಎಂಬುವವರ ಪುತ್ರ ರೋಷನ್‍ಗೆ ಹಾವು ಕಚ್ಚಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ರೋಷನ್‍ನನ್ನು ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೈಕ್‍ನಲ್ಲಿ ಕರೆ ತಂದಿದ್ದಾರೆ.

ಆದರೆ ಅಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಸಕಲೇಶಪುರ ಪಟ್ಟಣ್ಣದ ಆಸ್ಪತ್ರೆಗೆ ತೆರಳುವಂತೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಂಬುಲೆನ್ಸ್‌ಗೆ ಕರೆ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!