December 16, 2025

ಮೂಡಬಿದಿರೆ: ಕಸಾಯಿಖಾನೆಗೆ ಹಿಂಜಾವೇ ಕಾರ್ಯಕರ್ತರಿಂದ ದಾಳಿ

0
image_editor_output_image21042894-1671857162108.jpg

ಮೂಡಬಿದಿರೆ: ಇಂದು ಬೆಳ್ಳಂಬೆಳಗ್ಗೆ ಅಕ್ರಮ ಕಸಾಯಿಖಾನೆಗೆ ಹಿಂಜಾವೇ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ.

ಮೂಡಬಿದಿರೆಯ ಅಲಾಂಗರಿನ ಆಶ್ರಯ ಕಾಲೋನಿಯಲ್ಲಿರುವ ಗಿಲ್ಬರ್ಟ್ ಮಿರಾಂದ ಎಂಬವನ ಅಕ್ರಮ ಕಸಾಯಿ ಖಾನೆಗೆ ಇಂದು ಬೆಳಿಗ್ಗೆ 4 ಗಂಟೆಗೆ ಖಚಿತ ಮಾಹಿತಿ ಮೇರೆಗೆ ಹಿಂಜಾವೇ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.

ಈ ಸಮಯದಲ್ಲಿ 4 ಗೋವು ಮತ್ತು ಹೆಚ್ಚಿನ ಪ್ರಮಾಣದಲ್ಲಿ ಮಾಂಸ ವಶ ಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಮೂಡಬಿದ್ರೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!