ಪ್ರವಾಸಕ್ಕೆ ತೆರಳಿದ್ದ ಖಾಸಗಿ ಬಸ್ ಪಲ್ಟಿ: ನಾಲ್ವರು ವಿದ್ಯಾರ್ಥಿಗಳು ಸೇರಿ ಏಳು ಮಂದಿಗೆ ಗಾಯ
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ನಾಲ್ವರು ವಿದ್ಯಾರ್ಥಿಗಳು ಸೇರಿ ಏಳು ಮಂದಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ಹೊರವಲಯದ ಕುವೆಂಪುನಗರದಲ್ಲಿ ನಡೆದಿದೆ.
ಕನಕಪುರದ ಸರ್ಕಾರಿ ಶಾಲೆಯ ಎಸ್‍ಎಸ್‍ಎಲ್‍ಸಿ (SSLC) ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರವಾಸಕ್ಕೆ ಬಂದಿದ್ದರು. ಕನಕಪುರದಿಂದ ಬುಧವಾರ ಎರಡು ಬಸ್‍ಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಸೇರಿ 71 ಮಂದಿ ಪ್ರವಾಸ ಹೊರಟಿದ್ದರು. ಪ್ರವಾಸ ಮುಗಿಸಿ ವಾಪಾಸ್ ಆಗುವಾಗ ಇಂದು ಬೆಳಗ್ಗೆ ಬಸ್ ಪಲ್ಟಿಯಾಗಿದೆ.
ಬಸ್‍ನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಹಾಗೂ ಮೂವರು ಶಿಕ್ಷಕರಿಗೆ ಗಾಯಗಳಾಗಿದ್ದು, ಬೇಲೂರು ಹಾಗೂ ಹಾಸನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.




